Narayana Gowda: ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸುತ್ತಿದ್ದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡರು ನಟ ಸುದೀಪ್ ಅವರನ್ನು ಭೇಟಿಯಾಗಿದ್ದಾರೆ. ಇದು ಭಾರೀ ಕುತೂಹಲ ಕೆರಳಿಸಿದೆ.
ಹೌದು, ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ ಬೆರಳಣಿಕೆಯ ದಿನಗಳು ಉಳಿದಿದ್ದು, ಟ್ರೋಫಿ ಯಾರು ಗೆಲ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಸುದೀಪ್ ನಿವಾಸಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರು ಭೇಟಿ ನೀಡಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಿಗ್‌ಬಾಸ್ ಸ್ಪರ್ಧಿಯಾಗಿರುವ ಅಶ್ವಿನಿ ಗೌಡ ಸಹ ಕನ್ನಡ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಇನ್ನು ಅಶ್ವಿನಿ ಗೌಡ ನಾರಾಯಣ ಗೌಡರ ಶಿಷ್ಯೆ ಎಂದು ಹೇಳಲಾಗುತ್ತಿದೆ. ಇನ್ನು ಫಿನಾಲೆ ಹಂತದಲ್ಲಿರುವ ಸ್ಪರ್ಧಿಗಳಿಗೆ ಮೂರು ಆಸೆಗಳನ್ನು ಕೋರಿಕೊಳ್ಳಲು ಅವಕಾಶ ನೀಡಲಾಗಿತ್ತು. ಅದರಂತೆ ಅಶ್ವಿನಿಗೌಡ ಬಿಗ್‌ಬಾಸ್ ಮನೆಯಲ್ಲಿ ನಾರಾಯಣ ಗೌಡರನ್ನು ನೋಡಬೇಕು. ಅವರ ಅಶೀರ್ವಾದ ಪಡೆದುಕೊಳ್ಳಬೇಕು ಎಂದು ಹೇಳಿದ್ದರು.
ಭೇಟಿ ಹಿಂದಿನ ಅಸಲಿ ಸತ್ಯವೇನು?
ನಾರಾಯಣಗೌಡ ಅವರ ಭೇಟಿಯು ಬಿಗ್‌ಬಾಸ್ ಕುರಿತು ಅಲ್ಲವೇ ಅಲ್ಲ, ಈ ಎಲ್ಲ ಚರ್ಚೆಗಳಿಗೆ ಅವರ ಫೋಟೋಗಳೇ ಸ್ಪಷ್ಟನೆ ನೀಡುತ್ತಿವೆ. ನಾರಾಯಣಗೌಡ-ಸುದೀಪ್ ಭೇಟಿಗೆ ಬಿಗ್‌ಬಾಸ್ ಅಥವಾ ಅಶ್ವಿನಿ ಗೌಡ ಅವರ ಸ್ಪರ್ಧೆಗೆ ಯಾವುದೇ ಸಂಬಂಧವೇ ಇಲ್ಲ ಎಂದು ಹೇಳಿವೆ. ಅಸಲಿಗೆ, ನಾರಾಯಣಗೌಡರು ತಮ್ಮ ಕುಟುಂಬದಲ್ಲಿನ ವಿವಾಹ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರಿಗೆ ಆಮಂತ್ರಣ ನೀಡಲು ತೆರಳಿದ್ದರು ಎಂಬುದು ಸ್ಪಷ್ಟವಾಗಿದೆ. ಇದು ಸಂಪೂರ್ಣವಾಗಿ ವೈಯಕ್ತಿಕ ಮತ್ತು ಸಾಮಾಜಿಕ ಭೇಟಿಯಾಗಿದ್ದು, ಅದಕ್ಕೆ ಬೇರೆ ಯಾವುದೇ ರಾಜಕೀಯ ಅಥವಾ ಬಿಗ್‌ಬಾಸ್ ಹಿನ್ನೆಲೆ ಇಲ್ಲ ಎನ್ನುವುದು ಖಚಿತವಾಗಿದೆ.
