Home » Assembly : ರಾಜ್ಯದಲ್ಲಿ ಜ. 22ರಿಂದ 5 ದಿನ ವಿಶೇಷ ಅಧಿವೇಶನ!!

Assembly : ರಾಜ್ಯದಲ್ಲಿ ಜ. 22ರಿಂದ 5 ದಿನ ವಿಶೇಷ ಅಧಿವೇಶನ!!

0 comments

Assembly : ರಾಜ್ಯ ಸರ್ಕಾರವು ರಾಜ್ಯದಲ್ಲಿ ಐದು ದಿನ ವಿಶೇಷ ಅಧಿವೇಶನವನ್ನು ನಡೆಸಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ 22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಹೌದು, ಐದು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಾನೂನು ಸಚಿವ ಹೆಚ್​​.ಕೆ ಪಾಟೀಲ್​​, ವಿಬಿಜಿ ರಾಮ್‌ಜಿ ಯೋಜನೆ ವಿರುದ್ದ ನಿರ್ಣಯ ತೆಗೆದು, ಜನಹಿತ ರಾಜ್ಯದ ಹಿತ ಕಾಪಾಡಲು ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ, ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು, ಮನ್‌ರೇಗಾ ಯೋಜನೆ ಮರುಸ್ಥಾಪನೆಗೆ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಅಲ್ಲದೆ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂಗೆ ಪರಮಾಧಿಕಾರ ನೀಡಲಾಗಿದೆ ಎಂದರು.

You may also like