Home » ವಲಸಿಗರ ಶೆಡ್‌ನಲ್ಲಿ ದಾಂಧಲೆ ಪುನೀತ್ ಬಂಧನ, ಬಿಡುಗಡೆ

ವಲಸಿಗರ ಶೆಡ್‌ನಲ್ಲಿ ದಾಂಧಲೆ ಪುನೀತ್ ಬಂಧನ, ಬಿಡುಗಡೆ

by Mallika
0 comments

ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರೆಂದು ಆರೋಪಿಸಿ ಅವರ ಶೆಡ್‌ಗಳಿಗೆ ತೆರಳಿ ದಾಖಲೆ ತೋರಿಸುವಂತೆ ದಾಂಧಲೆ ನಡೆಸಿದ ಆರೋಪ ಪ್ರಕರಣದಲ್ಲಿ ಬನ್ನೇರುಘಟ್ಟ ಠಾಣೆ ಪೊಲೀಸರು, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿಯನ್ನು ಶನಿವಾರ ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ ಹಾಗೂ ಸುತ್ತಲ ಪ್ರದೇಶಗಳಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆಂದು ಆರೋಪಿಸಿ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡವು ಕೆಲ ಶೆಡ್‌ಗಳಿಗೆ ತೆರಳಿ ವಿಡಿಯೊ ಚಿತ್ರೀಕರಿಸಿದ್ದರು.

ಈ ದೃಶ್ಯಾವಳಿಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಪುನೀತ್ ಕೆರೆಹಳ್ಳಿ ಅವರು ತಮ್ಮ ಶೆಡ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿ ಸಿದ್ದೇಶ್ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಜನರನ್ನು ಸೇರಿಸಿ ದಾಂಧಲೆ ಸೃಷ್ಟಿಸಿದ ಪುನೀತ್ ಕೆರೆಹಳ್ಳಿ ಬೆಂಬಲಿಗ ನಾಗೇಂದ್ರಪ್ಪ ಎಂಬುವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಠಾಣೆ ಮುಂದೆ ಹೈಡ್ರಾಮ: ಪುನೀತ್ ಕೆರೆಹಳ್ಳಿ ಬಂಧನ ಘಟನೆಯು ಪೊಲೀಸ್ ಠಾಣೆ ಮುಂದೆ ಹೈಡ್ರಾಮ ಸೃಷ್ಟಿಸಿತ್ತು. ಪುನೀತ್ ಕೆರೆಹಳ್ಳಿ ಬೆಂಬಲಿಗರು ಠಾಣೆ ಬಳಿ ಜಮಾಯಿಸಿ ಘೋಷಣೆಗಳನ್ನು ಕೂಗಿದರು

You may also like