Home » ರಾಜೀವ್‌ ಗೌಡ ಜಾಮೀನು ಅರ್ಜಿ ವಿಚಾರಣೆ 22ಕ್ಕೆ

ರಾಜೀವ್‌ ಗೌಡ ಜಾಮೀನು ಅರ್ಜಿ ವಿಚಾರಣೆ 22ಕ್ಕೆ

0 comments

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ನಗರಸಭೆ ಪೌರಾಯುಕ್ತಗೆ ಧಮ್ಮಿ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಂತಾಮಣಿಯ ಜೆಎಂಎಫ್‌ಸಿ ನ್ಯಾಯಾಲಯ ದಲ್ಲಿ ನಿರೀಕ್ಷಣಾ ಹಾಗೂ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಜ.22ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಧಮ್ಕಿ ಹಾಕಿದ ವಿಷಯ ಬೆಳಕಿಗೆ ಬರುತ್ತಿದ್ದಂತೆ ವಿಡಿಯೊ ಮೂಲಕ ಕ್ಷಮೆ ಕೇಳಿರುವ ರಾಜೀವ್‌ ಗೌಡ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ.

ಮತ್ತೊಂದೆಡೆ ರಾಜೀವ್‌ ಗೌಡ ಬಂಧನಕ್ಕೆ ಒತ್ತಡ ಹೆಚ್ಚಾಗುತ್ತಿದ್ದು, ಪೊಲೀಸರು ಮೂರು ತಂಡಗಳನ್ನು ರಚಿಸಿ ರಾಜೀವ್ ಗೌಡರ ಬೆಂಗಳೂರು ನಿವಾಸ ಸೇರಿದಂತೆ ಹಲವೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ

You may also like