Home » Parappana agrahara: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ!

Parappana agrahara: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ!

A+A-
Reset

Parappana agrahara: ಪರಪ್ಪನ ಅಗ್ರಹಾರದಲ್ಲಿ (Parappana Agrahara jail) ಇದೀಗ ಜೈಲಿನ ಅಸಿಸ್ಟೆಂಟ್ ಜೈಲರ್ ಮೇಲೆ ಕೈದಿಗಳೆಲ್ಲ (prisoners) ಸೇರಿ ಹಲ್ಲೆ (Assault) ನಡೆಸಿರುವ ಆರೋಪ ಕೇಳಿ ಬಂದಿದೆ.

ಪರಪ್ಪನ ಅಗ್ರಹಾರದ ಶಿಕ್ಷಾ ಬಂಧಿಗಳಾದ ಆನಂದ (1489) ಮತ್ತು ಅಬ್ದುಲ್ ಘನಿ (18589) ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಇಬ್ಬರೂ ಸೇರಿ ಅನಾವಶ್ಯಕವಾಗಿ ಶಿಕ್ಷಾ ಬಂಧಿ ಕಚೇರಿಗೆ ಪ್ರವೇಶಿಸಲು ಪ್ರಯತ್ನಿಸಿದ್ದು, ಅದನ್ನು ತಡೆಯಲು ಮುಂದಾದ ಅಸಿಸ್ಟೆಂಟ್ ಜೈಲರ್ ಮೇಲೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಭಾರ ಅಧೀಕ್ಷಕರು ದೂರು ಸಲ್ಲಿಸಿದ್ದಾರೆ. ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುವಂತೆ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಣ ತಪ್ಪುವ ಮುನ್ನ ಸಿಬ್ಬಂದಿಗೆ ಅಗತ್ಯವಾದ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಜ.7ರಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆ ಈ ಘಟನೆ ಸಂಭವಿಸಿದ್ದು, ಜ.17ರಂದು ಸಿಬ್ಬಂದಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.