Home » Home ಹೊಸ ಕನ್ನಡ » ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ

ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ

A+A-
Reset

ಚಾರ್ಮಾಡಿ: ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಉರಿಯುತ್ತಿದ್ದು, ಗಿಡಮರಗಳು ಹೊತ್ತಿ ಉರಿಯುತ್ತಿರುವ ಘಟನೆ ಜ.18 ರಂದು ನಡೆದಿದೆ.

ಚಾರ್ಮಾಡಿ ಘಾಟಿ ದಟ್ಟ ಕಾನನ, ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕೂಡಿರೋ ಅರಣ್ಯ ಬೇಸಿಗೆಯಲ್ಲಿ ಅಷ್ಟೇ ಪ್ರಮಾಣದಲ್ಲಿ ಒಣಗಿ ನಿಂತಿರುತ್ತದೆ. ಯಾರೋ ಕಿಡಿಗೇಡಿಗಳು ಕೊಟ್ಟ ಬೆಂಕಿಗೆ ಅರಣ್ಯ ಭೂಮಿ ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ.

ಅರಣ್ಯದ ಮೇಲ್ಭಾಗದಲ್ಲಿ ಹೊತ್ತಿ ಉರಿಯುತ್ತಿರುವುದು ಕಂಡು ಬರುತ್ತಿದ್ದು, ಸಂಜೆ ವೇಳೆ ಹೊಗೆಯಾಡುತ್ತಿದ್ದು, ರಾತ್ರಿ ಆಗುತ್ತಿದ್ದಂತೆ ಬೆಂಕಿ ಹೆಚ್ಚಾಗಿದೆ. ನಂತರ ಅದು ನಿಯಂತ್ರಣ ಮೀರಿ ಬೆಂಕಿ ಆವರಿಸಿದ್ದು, ಆತಂಕಕ್ಕೆ ಕಾರಣವಾಗಿದೆ.