Home » Home ಹೊಸ ಕನ್ನಡ » ಕಡಬ: ಬಾರ್‌ನಲ್ಲಿ ಯುವಕನ ಮೇಲೆ ಹಲ್ಲೆ, ಜಾತಿನಿಂದನೆ: ಮೂವರ ವಿರುದ್ಧ ದೂರು ದಾಖಲು

ಕಡಬ: ಬಾರ್‌ನಲ್ಲಿ ಯುವಕನ ಮೇಲೆ ಹಲ್ಲೆ, ಜಾತಿನಿಂದನೆ: ಮೂವರ ವಿರುದ್ಧ ದೂರು ದಾಖಲು

A+A-
Reset

ಕಡಬ: ಹೋಟೆಲ್‌ವೊಂದರಲ್ಲಿ ಯುವಕನ ಮೇಲೆ ವಿನಾಕಾರಣ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆಗೆ ಕುರಿತಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ (28) ಎಂಬುವವರು ಜ.16 ರಂದು ರಾತ್ರಿ 10.00 ಗಂಟೆ ಸುಮಾರಿಗೆ ಕಡಬ ಗ್ರಾಮದ ಕಳಾರದಲ್ಲಿರುವ ʼಸುರಭಿ ಬಾರ್‌ ಮತ್ತು ರೆಸ್ಟೋರೆಂಟ್‌ʼಗೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ಕ್ಯಾಶ್‌ ಕೌಂಟರ್‌ನಲ್ಲಿ ನಿಂತಿದ್ದ ಸಂದರ್ಭ, ಅಲ್ಲಿಗೆ ಬಂದ ಪರಿಚಯದವರಾದ ಅಜಯ್‌, ಬೇಬಿ, ಅನಿಲ್‌ ಎನ್ನುವವರು ವಿನಾಕಾರಣ ಜಗಳ ತೆಗೆದಿದ್ದಾರೆ ಎಂದು ವರದಿಯಾಗಿದೆ.

ಆರೋಪಿಗಳು ಜಗದೀಶ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜಾತಿ ನಿಂದನೆ ಮಾಡಿದ್ದು ಮಾತ್ರವಲ್ಲದೇ ಹಲ್ಲೆ ಮಾಡಿದ್ದಾರೆ. ಅಷ್ಟು ಅಲ್ಲದೇ ಪ್ರಾಣ ಬೆದರಿಕೆ ಕೂಡಾ ಹಾಕಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಜಗದೀಶ ಅವರು ನೀಡಿದ ದೂರಿನನ್ವಯ ಕಡಬ ಪೊಲೀಸರು ಆರೋಪಿಗಳ ವಿರುದ್ಧ ಹಲವು ಪ್ರಕರಣಗಳ ಅಡಿಯಲ್ಲಿ ಕೇಸು ದಾಖಲಾಗಿದೆ.
ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ಈ ಕುರಿತು ತನಿಖೆ ಮುಂದುವರಿಸಿರುವ ಕುರಿತು ವರದಿಯಾಗಿದೆ.