4
ಮಡಂತ್ಯಾರು :ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ ಇವರು ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ತರಬೇತಿ ಕೇಂದ್ರ ಪಚ್ಮಾಡಿ ವತಿಯಿಂದ ನೀಡಲಾಗುವ ಪ್ರಮಾಣ ಪತ್ರ ಹಾಗೂ ಪಾಚ್ಮೆಂಟ್ ಗೆ ಭಾಜಾನರಾಗಿದ್ದಾರೆ.

ಇವರು ಜನವರಿಯಲ್ಲಿ ನಡೆದ ದೊಡ್ಡಬಳ್ಳಾಪುರ ದ ಅನಿಬೇಸಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ಸ್ಕೌಟ್ಸ್ ವಿಭಾಗದ ಲೀಡರ್ ಟ್ರೈನರ್ ಗುರುಮೂರ್ತಿ ಎಂ. ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.
ಶಾಲೆಯ ಮುಕ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದರು

