Home Education  ದ್ವಿತೀಯ ಪಿಯು ಪ್ರಾಯೋಗಿಕ ಅಂಕ ನಮೂದಿಸಲು ಸೂಚನೆ

 ದ್ವಿತೀಯ ಪಿಯು ಪ್ರಾಯೋಗಿಕ ಅಂಕ ನಮೂದಿಸಲು ಸೂಚನೆ

0
5
SSLC PUC Exam

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಅಂಕಗಳನ್ನು ನಮೂದಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಪ್ರಾಯೋಗಿಕ ಅಂಕಗಳನ್ನು ಆನ್‌ಲೈನ್ ಮೂಲಕ ಅಪ್ ಲೋಡ್ ಮಾಡುವ ಕುರಿತು ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸುವಂತೆ ಮಂಡಳಿಯ ನಿರ್ದೇಶಕ ಗೋಪಾಲಕೃಷ್ಣ ತಿಳಿಸಿದ್ದಾರೆ.

134 ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳ ಪಟ್ಟಿಯಲ್ಲಿರುವ ಕಾಲೇಜುಗಳಲ್ಲಿ ಮಾತ್ರ ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (ಎನ್ ಎಸ್‌ಕ್ಯೂಎಫ್) ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಆನ್‌ಲೈನ್‌ನಲ್ಲಿ ನಿಗದಿಪಡಿಸಿದ ದಿನಾಂಕದಂದು ನಮೂದಿಸಬೇಕು. ವಿದ್ಯಾರ್ಥಿಗಳು, ಪಡೆದ ಅಂಕಗಳನ್ನು ಖಾಲಿ ಉತ್ತರದ ಹಾಳೆಯಲ್ಲಿಯೂ ಭರ್ತಿ ಮಾಡಿ ಸಹಿ ಮಾಡಬೇಕು. ಸೀಲ್ ಮಾಡಿದ ಲಕೋಟೆಯಲ್ಲಿ ಮಂಡಳಿಗೆ ರಿಜಿಸ್ಟರ್ಡ್ ಅಂಚೆ ಮೂಲಕ ಕಳಿಸಿಕೊಡಬೇಕು ಎಂದು ಸೂಚಿಸಲಾಗಿದೆ.

ಪ್ರಾಯೋಗಿಕ ಅಂಕಗಳನ್ನು ನಮೂದಿಸುವ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (ಎನ್‌ಎಸ್‌ಕ್ಯೂಎಫ್) ಸಮನ್ವಯಕಾರರ ಸಮನ್ವಯದೊಂದಿಗೆ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸಲು ಸೂಚಿಸಲಾಗಿದೆ. ಪರೀಕ್ಷೆಗಳನ್ನು ಫೆ.14ರೊಳಗೆ ಮುಗಿಸಲು ಸೂಚಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.