ಬೆಂಗಳೂರು: ಸದಾಶಿವನಗರದಲ್ಲಿ ಸೋಮವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿದ್ದ ವ್ಯಕ್ತಿಯನ್ನು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸರಕಾರಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ರಸ್ತೆ ಬದಿಯಲ್ಲಿ ನರಳಾಡುತ್ತಿದ್ದರು. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಗಾಯಾಳು ವ್ಯಕ್ತಿಯನ್ನು ನೋಡಿದ ತಕ್ಷಣವೇ ತಮ್ಮ ಕಾರು ಚಾಲಕನಿಗೆ ಹೇಳಿ ವಾಹನ ನಿಲ್ಲಿಸಿದ್ದಾರೆ. ನಂತರ ಗಾಯಾಳು ವನ್ನು ಅದೇ ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ನಂತರ ವೈದ್ಯರೊಂದಿಗೆ ಮಾತನಾಡಿ ಗಾಯಾಳುವಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಿಯಾಂಕ್ ಖರ್ಗೆ ಅವರ ಮಾನವೀಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ ಮೆಚ್ಚುಗೆ ವ್ಯಕ್ತವಾಗಿದೆ.



