Home News Shabarimale: ಶಬರಿಮಲೆ ಚಿನ್ನ ಕಳ್ಳತನ ಕೇಸ್: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

Shabarimale: ಶಬರಿಮಲೆ ಚಿನ್ನ ಕಳ್ಳತನ ಕೇಸ್: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

   Shabarimala: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇಡಿ ದಾಳಿ (ED Raid) ನಡೆಸಿದೆ.

ಈ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ ತಿರುವನಂತಪುರಂದ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ. 

ಚಿನ್ನ ಕಳ್ಳತನದ ಆರೋಪದಲ್ಲಿ ಜೈಲುಪಾಲಾಗಿರುವ ಗೋವರ್ಧನ್ ಒಡೆತನದ ರೊದ್ದಂ ಜ್ಯುವೆಲರಿ ಶಾಪ್ ಹಾಗೂ ಮನೆ, ಬೆಂಗಳೂರಿನ ಶ್ರೀರಾಂಪುರ ಅಯ್ಯಪ್ಪ ದೇವಸ್ಥಾನ ಹಾಗೂ ಟ್ರಸ್ಟಿ ಮನೆ, ಉನ್ನಿಕೃಷ್ಣನ್ ಮನೆ ಸೇರಿ ಹಲವೆಡೆ ದಾಳಿ ನಡೆಸಿದ್ದಾರೆ. ಈ ಹಿಂದೆ ಎಸ್‌ಐಟಿ ಅಧಿಕಾರಿಗಳು ಕೂಡ ದಾಳಿ ನಡೆಸಿದ್ದರು.