ಧರ್ಮಸ್ಥಳ (ಜ. 19): ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜನವರಿ 19 ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮೀ ಮಾತನಾಡಿ, ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತ ವಿದ್ಯೆ ಎಂದಿಗೂ ನಮಗೆ ಶಾಶ್ವತ ಮಹಿಳೆಯರು ಯಾವತ್ತಿಗೂ ಇನ್ನೊಬ್ಬರಿಗೆ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗುವಂತೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಪಿಡಿಓ ಶ್ರೀಮತಿ ಗಾಯತ್ರಿ, ಕನ್ಯಾಡಿ ಸೇವಾಭಾರತಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ, ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಮಮತಾ, ಕೌಶಲ್ಯ ವಲಯ ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ.ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 32 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಸುಮತಿ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಟೈಲರಿಂಗ್ ಶಿಬಿರಾರ್ಥಿಗಳ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
LCRP ಶ್ರೀಮತಿ ಪುಷ್ಪಾವತಿ ಸ್ವಾಗತಿಸಿ, ಮಾನ್ವಿಶ್ರೀ ಒಕ್ಕೂಟದ MBK ಶ್ರೀಮತಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿ, ಪಶು ಸಖಿ ಶ್ರೀಮತಿ ಯಶೋಧ ಧನ್ಯವಾದವಿತ್ತರು.












