PUC: ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದೆ. ಪಿಯು ಫಲಿತಾಂಶದ ಸುಧಾರಣೆಗೆ ಇಲಾಖೆ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಗ್ರೂಪ್ ಸ್ಟಡಿ ಮಾಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಕಾಲೇಜಿನಲ್ಲಿಯೇ ವಿದ್ಯಾರ್ಥಿಗಳನ್ನು ಮುಖ್ಯ ಪರೀಕ್ಷೆಗೆ ತಯಾರಿ ಮಾಡಬೇಕು ಈ ಹಿನ್ನೆಲೆ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಲು ಎಂದು ಶಿಕ್ಷಣ ಇಲಾಖೆ ನಿರ್ಧರಿಸಿದೆ.













