GBA: 2026ರ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಹೌದು, ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನಿನ್ನೆಯಷ್ಟೇ ಅಧಿಕಾರ ಸ್ವೀಕರಿಸಿದ್ದು, ಜವಾಬ್ದಾರಿ ವಹಿಸಿಕೊಂಡ ಕೆಲಗಂಟೆಗಳಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. GBA ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಣಮಿಸಿದೆ.













