Home News ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ರಮಾನಾಥ ರೈ

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ರಮಾನಾಥ ರೈ

Ramanatha Rai
Image Source: Vijaya karnataka

ಮಂಗಳೂರು: ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವ ರಮಾನಾಥ ರೈ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವಸ್ಥಾನದಲ್ಲಿ ಕೇಸರಿ ಬಾವುಟ ಸೇರಿ ಯಾವುದೇ ಧ್ವಜ ಹಾರಿಸಬೇಡಿ ಎಂದು ಹೇಳಿಕೆ ನೀಡಿದ್ದಾರೆ. ಇದು ದಕ್ಷಿಣ ಕನ್ನಡದ ಹಿಂದೂ ನಾಯಕರನ್ನು ಕೆರಳಿಸಿದೆ.

Hindu neighbour gifts land to Muslim journalist

Hindu neighbor gifts plot of land

ಈ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿ ಹೀಗೆ ಮಾತನಾಡುವುದು ಸರಿಯಲ್ಲ ಎಂದು ನೆಟ್ಟಿಗರು ಹೇಳಿದ್ದಾರೆ.

Hindu neighbour gifts land to Muslim journalist

Hindu neighbor gifts plot of land

ಉಡುಪಿ ಮಠ ಪರ್ಯಾ ಮಹೋತ್ಸವದಲ್ಲಿ ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿದ್ದು, ಇದನ್ನು ಖಂಡಿಸುವ ಭರದಲ್ಲಿ ದೇವಾಲಯದಲ್ಲಿ ಕೇಸರಿ ಬಾವುಟ ಹಾಕಬೇಡಿ ಎಂದು ಹೇಳಿದ್ದಾರೆ.

Hindu neighbour gifts land to Muslim journalist

Hindu neighbor gifts plot of land

ಉಡುಪಿ ಡಿಸಿ ಭಗವಾಧ್ವಜ ಹಾರಿಸಿದ್ದ ತಪ್ಪು, ಇದನ್ನು ಒಪ್ಪಲು ಸಾಧ್ಯವಿಲ್ಲ. ಅವರ ಮೇಲೆ ಸರಿಯಾದ ಕ್ರಮ ಆಗಬೇಕು. ದೇವಾಲಯದ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಪತಾಕೆ ಧಿಕ್ಕರಿಸಬೇಕು. ದೇಗುಲದಲ್ಲಿ ಕಾಂಗ್ರೆಸ್, ಕೇಸರಿ, ಹಸಿರು ಯಾವುದೇ ಬಾವುಟ ಹಾಕಬೇಡಿ ಎಂದು ಹೇಳಿದ್ದಾರೆ. ದೇವಸ್ಥಾನದಲ್ಲಿ ನಡೆಯುವುದು ಕಾರ್ಯಕ್ರಮವೂ ಎಲ್ಲರಿಗೂ ಸಂಬಂಧಿಸಿದೆ. ಈ ಕಾರಣಕ್ಕೆ ದೇಗುಲದಲ್ಲಿ ಕೇಸರಿ ಧ್ವಜ ಹಾರಿಸಬಾರದು. ದೇಗುಲದ ಉತ್ಸವಗಳಲ್ಲಿ ಭಗವಾಧ್ವಜ ಹಾರಿಸುವುದನ್ನು ವಿರೋಧಿಸಬೇಕು ಎಂದು ಅವರು ಮಂಗಳೂರಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ವೇಳೆ ಹೇಳಿದ್ದಾರೆ.

Hindu neighbour gifts land to Muslim journalist

Hindu neighbor gifts plot of land

ಹಿಂದೂ ಪರ ಸಂಘಟನೆಗಳು ಹಾಗೂ ನಾಯಕರು ಮಾಜಿ ಸಚಿವ ರಮಾನಾಥ ರೈ ಹೇಳಿಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಭಾರೀ ಚರ್ಚೆ ನಡೆದಿದೆ. ಹಿಂದೂ ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸದೇ ಬೇರೆ ಯಾವ ಧ್ವಜ ಹಾರಿಸಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ದೇವಾಲಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಹೇಳಿದ್ದಾರೆ.

Hindu neighbour gifts land to Muslim journalist

Hindu neighbor gifts plot of land