ರಾಜ್ಯಪಾಲರು ನಿರ್ಗಮಿಸುವ ವೇಳೆ ಮುತ್ತಿಗೆ ಹಾಕಲು ಯತ್ನ ಮಾಡಿದ ಆಡಳಿತ ಪಕ್ಷ ಕಾಂಗ್ರೆಸ್ ನಡೆಗೆ ಬಿಜೆಪಿ ಕಿಡಿ ಕಾರಿದ್ದು, ಈ ಕುರಿತು ಸ್ಪೀಕರ್ ಯು ಟಿ ಖಾದರ್ ಅವರಿಗೆ ಲಿಖಿತ ದೂರನ್ನು ಬಿಜೆಪಿ ಸಲ್ಲಿಸಿದೆ.
ರಾಜ್ಯಪಾಲರಿಗೆ ಅಗೌರವ ತೋರಿಸಿದ ಶಾಸಕರು, ಎಂಎಲ್‌ಸಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ದೂರನ್ನು ನೀಡಿದ್ದು, ರಾಜ್ಯಪಾಲರನ್ನು ಅಡ್ಡಗಟ್ಟಿ, ತಳ್ಳಾಡಿ, ನೂಕುನುಗ್ಗಲು ಉಂಟು ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.















