ಚಾರ್ಮಾಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಶಾರದಾ ರವರ ಅಧ್ಯಕ್ಷತೆಯಲ್ಲಿ ಜ.22ರಂದು ಗ್ರಾಮ ಪಂಚಾಯತ್ ಚಾರ್ಮಾಡಿ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಹಿಂದುಳಿದ ವರ್ಗ ಅಲ್ಪಸಂಖ್ಯಾತ ನಿಗಮದ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಜೋಸೆಫ್ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಗ್ರಾಮ ಸಭೆ ಪ್ರಾರಂಭಕ್ಕೂ ಮೊದಲೇ ಪಂಚಾಯತ್ ಎದುರು ಜೆ. ಜೆ. ಎಂ, ಕಾಮಗಾರಿಯ ಸಿಬ್ಬಂದಿಗಳಿಗೆ ನಿಲ್ಲಲು ಹಾಕಿರುವ ಪ್ಲಾಸ್ಟಿಕ್ ಬಿಡರಗಳನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿದರು. ಗ್ರಾಮಸಭೆ ನಡೆಸಲು ಬಿಡುವುದಿಲ್ಲ ಮುಂದುಡಿಸಿ ಎಂದು ಒತ್ತಾಯಿಸಿದರು. ಅಧ್ಯಕ್ಷರಿಗೆ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಯಾವುದೇ ಪ್ರತಿಕ್ರಿಯೆ ನೀಡಲು ಅವಕಾಶ ಕೊಡದೆ ದಿಕ್ಕಾರ ಕೂಗಿ ವೇದಿಕೆಯ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದ ಘಟನೆಯು ನಡೆಯಿತು.…















