ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು, ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ.
ಹೈಯರ್ ಮತ್ತು ಲೋವರ್ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮತ್ತು 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಅವರಿಗೆ ಶಿಕ್ಷಕ ವೃಂದ ಮತ್ತು ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ. ಆರ್. ಅವರು ಅಭಿನಂದನೆ ಸಲ್ಲಿಸಿರುತ್ತಾರೆ. ಶಾಲೆಯ ಚಿತ್ರಕಲಾ ಶಿಕ್ಷಕ ಜಯರಾಮ ಪಿ.ಎಸ್. ತರಬೇತಿ ನೀಡಿರುತ್ತಾರೆ.















