Home News ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ‌ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌: ʼಬಲವಂತದ ಕ್ರಮʼ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ‌ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌: ʼಬಲವಂತದ ಕ್ರಮʼ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

Kalladka Prabhakar Bhatt
Image source: ಪ್ರಜಾವಾಣಿ

Hindu neighbour gifts land to Muslim journalist

Hindu neighbor gifts plot of land

ಪುತ್ತೂರು: ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಪುತ್ತೂರಿನಲ್ಲಿ ನಡೆದಿದ್ದ ವಿವದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಕುರಿತಂತೆ ಭಟ್‌ ಅವರ ವಿರುದ್ಧ ಯಾವುದೇ ರೀತಿಯ ʼಬಲವಂತದ ಕ್ರಮʼ ಕೈಗೊಳ್ಳದಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನವನ್ನು ನೀಡಿದೆ.

ಕಳೆದ ಜನವರಿ 12, 2026 ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುವಾಗ, ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ ಎನ್ನಲಾದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಪ್ರಭಾಕರ್ ಭಟ್ ಅವರ ಈ ಭಾಷಣವು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತಿದೆ ಮತ್ತು ಕೋಮು ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸಿ ಪುತ್ತೂರಿನ ನಿವಾಸಿ ರಾಮಚಂದ್ರ ಕೆ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಫ್‌ಐಆರ್ ರದ್ದು ಕೋರಿ ಭಟ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಸದ್ಯಕ್ಕೆ ಹೈಕೋರ್ಟ್‌ ತನಿಖೆಗೆ ತಡೆಯಾಜ್ಞೆ ನೀಡದಿದ್ದರೂ, ಬಂಧನದಂತಹ ಕಠಿಣ ಕ್ರಮಗಳಿಗೆ ಬ್ರೇಕ್‌ ಹಾಕಿದೆ.