ಪುತ್ತೂರು: ಜ.22: ಇಂದು (ಜ.22) ರಂದು ಬೆಳಿಗ್ಗೆ ಪುತ್ತೂರು ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬುವವರು ಕೋರ್ಟ್‌ನಲ್ಲಿ ಜಡ್ಜ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದರು.
ರವಿ ಅವರ ಪತ್ನಿ ತಮ್ಮ ವೈವಾಹಿಕ ಮನಸ್ತಾಪದ ಹಿನ್ನೆಲೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದು, ಇದನ್ನು ತಿಳಿದ ಇವರು ಮಾನ್ಯ ಪುತ್ತೂರು ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ ನ್ಯಾಯಾಲಯದ ಒಳಗೆ ಪ್ರವೇಶಿಸಿ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥರಾಗಿದ್ದರು. ನಂತರ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಮಾಡಲಾಗಿದೆ.
ಈ ಘಟನೆ ಮಾನ್ಯ ನ್ಯಾಯಾಲಯದ ಸಂಕೀರ್ಣದ ಒಳಗೆ ನಡೆದಿರುವ ಕಾರಣ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರು ಸ್ವಯಂ ದೂರು ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುತ್ತಾರೆ.
ಘಟನೆ ಕುರಿತು ತನಿಖೆ ನಡೆಯುತ್ತಿದೆ.















