

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರಕಾರ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸ್ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ.
ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿದೆ.
ಈ ತೀರ್ಪಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಅಧಿಕೃತ ಪುನಾರಂಭ ದೊರೆತಂತಾಗಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ಬೈಕ್ ಟ್ಯಾಕ್ಸಿ ನೀತಿಗೆ ಸಂಬಂಧಪಟ್ಟಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.













