

ಗೇರುಕಟ್ಟೆ: ಮನ್ಮರ್ ತಂಜಳ್ ರವರ ಸಾರಥ್ಯದ ಗೇರುಕಟ್ಟೆ ಮನ್ಮರ್ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ರವರು ಜ.22ರಂದು ಭೇಟಿ ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭವನ್ನು ಹಾರೈಸಿದರು.
ಗೇರುಕಟ್ಟೆ ಕಳಿಯ ಗ್ರಾ.ಪಂ. ಸದಸ್ಯರಾದ ಅಬ್ದುಲ್ ಕರೀಂ ಗೇರುಕಟ್ಟೆ, ಸಂಸ್ಥೆಯ ಜನರಲ್ ಮ್ಯಾನೇಜರ್ ಹೈರ್ದ ಮರ್ಧಾಳ, ಆಡಳಿತ ಅಧಿಕಾರಿ ರಶೀದ್ ಕುಪ್ಪೆಟ್ಟಿ, ಉಪಸ್ಥಿತರಿದ್ದರು
ಮನ್ಮರ್ ವಿದ್ಯಾಸಂಸ್ಥೆಯ ಪ್ರಾಂಶುಪಾಲರು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂಸ್ಥೆಯ ಪರವಾಗಿ ಶಾಲು ಹೊದಿಸಿ ಗೌರವಿಸಲಾಯಿತು.













