Home News ಕುಂಭಶ್ರೀ ಆಂಗ್ಲಮಾಧ್ಯಮ ಶಾಲಾ – ಕಾಲೇಜು ವೇಣೂರು: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕುಂಭಶ್ರೀ ಆಂಗ್ಲಮಾಧ್ಯಮ ಶಾಲಾ – ಕಾಲೇಜು ವೇಣೂರು: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Hindu neighbor gifts plot of land

Hindu neighbour gifts land to Muslim journalist

ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು. ಒಂಬತ್ತನೆಯ ತರಗತಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿ, ಹಾಡನ್ನು ಹಾಡುವುದರ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಕಲಿತ ಶಿಕ್ಷಣದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಶಾಲಾ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆಎಚ್ ಮತ್ತು ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಒಮನ ,ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಶ್ರೀ ಮನೋಜ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭ ಎಲ್ ಎನ್ ಹಾಗೂ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು ಒಂಬತ್ತನೇ ತರಗತಿಯ ಕುಮಾರಿ ದೃಶ್ಯ ಮತ್ತು ಕುಮಾರಿ ರಫೀಲ ಇವರು ನಿರೂಪಿಸಿ,ಕುಮಾರಿ ಸುಶ್ಮಿತಾ ಸ್ವಾಗತಿಸಿ , ಮಾಸ್ಟರ್ ದಯಾನಂದ್ ವಂದಿಸಿದರು.