Home News ನಾಳೆ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ

ನಾಳೆ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‌ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ಒಟ್ಟು 8 ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ ಹಾಗೂ ಸಮಾನಾಂತರ ಒಟ್ಟು 325 ಹುದ್ದೆಗಳ ನೇಮಕಾತಿಗೆ ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಅಂದು ರಾಜ್ಯದ 12 ಜಿಲ್ಲೆಗಳ (ಬೆಂಗಳೂರು, ಮೈಸೂರು, ತುಮಕೂರು, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ದಕ್ಷಿಣ ಕನ್ನಡ, ಕಲಬುರಗಿ, ಶಿವಮೊಗ್ಗ, ವಿಜಯಪುರ ಮತ್ತು ದಾವಣಗೆರೆ) ಒಟ್ಟು 319 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 1,33,346 ಅಭ್ಯರ್ಥಿಗಳು ಬರೆಯುತ್ತಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮ‌ರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.