

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಗಣರಾಜ್ಯೋತ್ಸವ ಆಚರಣೆಯನ್ನು ಸುಳ್ಯದ ಕುರುಂಜಿಭಾಗ್ ನ ಕೋರ್ಟ್ ಬಳಿ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಜನವರಿ 26ರಂದು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು.
ಜೇಸಿ ಹೆಚ್.ಜಿ.ಎಫ್. ನವೀನ್ ಕುಮಾರ್, ಪೂರ್ವಾಧ್ಯಕ್ಷರು, ಜೇಸಿಐ ಸುಳ್ಯ ಪಯಸ್ವಿನಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಕುರಿತು ಮಾತನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ನಿಕಟ ಪೂರ್ವ ಅಧ್ಯಕ್ಷರಾದ ಜೇಸಿ ಹೆಚ್.ಜಿ.ಎಫ್. ಸುರೇಶ್ ಕಾಮತ್, ಪೂರ್ವಾಧ್ಯಕ್ಷರಾದ ಜೇಸಿ ಹೆಚ್.ಜಿ.ಎಪ್ ಮೋಹನ್ ಎ. ಕೆ.,
ಜೇಸಿ ಹೆಚ್.ಜಿ.ಎಫ್ ಗುರುಪ್ರಸಾದ್ ನಾಯಕ್, ವಿದ್ಯಾರ್ಥಿನಿ ನಿಲಯದ ಶಿಬ್ಬಂದಿ ವರ್ಗದ ವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜೇಸಿಐ ಸುಳ್ಯ ಪಯಸ್ವಿನಿಯ ಕಾರ್ಯದರ್ಶಿ ಜೇಸಿ. ತಾರಾ ಮಾದವ ಚೂಂತಾರು ವಂದಿಸಿದರು.













