

ಬೆಂಗಳೂರು: ನಗರದ ರಾಮಮೂರ್ತಿ ನಗರದಲ್ಲಿ ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಶರ್ಮಿಳಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಗ್ನಿ ಅವಘಡದಿಂದ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎನ್ನುವುದಕ್ಕೆ ಇದೀಗ ಇದೊಂದು ಅತ್ಯಾಚಾರ ಯತ್ನ ಮತ್ತು ಬರ್ಬರ ಕೊಲೆ ಎಂದು ಪೊಲೀಸ್ ತನಿಖೆಯಲ್ಲಿ ಸಾಬೀತಾಗಿದೆ.
ಆರೋಪಿ 18 ವರ್ಷದ ವಿದ್ಯಾರ್ಥಿ ಕರ್ನಲ್ ಕುರೈ ಎನ್ನುವಾದ ಪೊಲೀಸರ ಮುಂದೆ ಹೇಳಿದ್ದಾನೆ.
ಆರೋಪಿ ಕರ್ನಲ್ ಕುರೈ ಮೃತ ಶರ್ಮಿಳಾ ವಾಸವಿದ್ದ ಮನೆಯ ಪಕ್ಕದಲ್ಲೇ ಇದ್ದ. ಈತನಿಗೆ ಶರ್ಮಿಳಾ ಮೇಲೆ ಪ್ರೀತಿ ಇರಲಿಲ್ಲ. ಬದಲಿಗೆ ವಿಕೃತ ಕಾಮವಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ. ಪ್ರತಿನಿತ್ಯ ಟೆರೇಸ್ ಮೇಲೆ ನಿಂತು ಶರ್ಮಿಳಾ ಚಲನವಲನಗಳನ್ನು ಸದ್ದಿಲ್ಲದೇ ಗಮನಿಸಿ ಹಿಂಬಾಲಿಸುತ್ತಿದ್ದ.
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶರ್ಮಿಳಾ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ, ಅತ್ಯಾ*ಚಾರ ನಡೆದಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಪಡೆಯಲು ಪೊಲೀಸರು ಕೆಲವು ಸ್ಯಾಂಪಲ್ಗಳನ್ನು ಎಫ್ಎಸ್ಎಲ್ (FSL) ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.













