Home News ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವ ದಿನದ ಆಚರಣೆ

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವ ದಿನದ ಆಚರಣೆ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ :ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಧ್ವಜಾರೋಹಣವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು. ತದನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಹೇಮಲತಾ ಎಂ ಆ‌ರ್ ಮತ್ತು ಅತಿಥಿ ಸ್ಥಾನವನ್ನು ಸಹ ಶಿಕ್ಷಕಿ ಜೆಸಿಂತಾ ರೋಡ್ರಿಗಸ್ ರವರು ವಹಿಸಿದರು.

ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಮುಂತಾದ ಕಾರ್ಯಕ್ರಮಗಳು ಜರುಗಿದವು. ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಹ ಶಿಕ್ಷಕಿ ಪ್ರಮೀಳಾ ಎನ್ ಮತ್ತು ಸೌಮ್ಯ ಪಿ ರವರು ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿಯವರ ಮಾರ್ಗದರ್ಶನ ಮತ್ತು ಶಿಕ್ಷಕ ವೃಂದದವರ ಸಂಪೂರ್ಣ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು