

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜನವರಿ 26ರಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. “ವಿದ್ಯಾರ್ಥಿಗಳು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತು ಪಾಲನೆ ಮಾಡುವುದರೊಂದಿಗೆ, ದೇಶದ ಸತ್ಪಜೆಯಾಗಿ, ಅಭಿವೃದ್ಧಿಗೆ ಕಾರಣರಾಗಬೇಕು ಎಂದು ದಯಾಳ್ ಬಾಗ್ ನ ಸಹಾಯಕ ನಿರ್ದೇಶಕರಾದ ಫಾ ಜೀವನ್ ವಾಲ್ಟರ್ ಡಿಸೋಜರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಫಾ ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ರಾಷ್ಟ್ರಗೀತೆ, ಧ್ವಜಗೀತೆ ಮತ್ತು ದೇಶಭಕ್ತಿ ಗೀತೆಗಳ ಗಾಯನದ ಮೂಲಕ ರಾಷ್ಟ್ರಕ್ಕೆ ಗೌರವ ಸಲ್ಲಿಸಲಾಯಿತು.
ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ಚಿತ್ರ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವಾದ ಆರ್ಟ್ ಕಾರ್ನಿವಲ್ 2K26ನ್ನು ಗಣರಾಜ್ಯದ ಪ್ರಯುಕ್ತ ಪೋಷಕರಿಗೆ ಮುಕ್ತ ಅವಕಾಶ ನೀಡಲಾಗಿತ್ತು. ಅನೇಕ ಪೋಷಕರು ಇದನ್ನು ವೀಕ್ಷಿಸಿ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಶ್ಲಾಘಿಸಿದರು. ವಿದ್ಯಾರ್ಥಿನಿಯರಾದ ಲಹರಿ ಸ್ವಾಗತಿಸಿ ಮಾನ್ವಿ ವಂದಿಸಿದರು. ವಿದ್ಯಾರ್ಥಿನಿ ಅನಿಶಾ ಡೇಸಾ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ವಿದ್ಯಾರ್ಥಿಗಳು ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ದೇಶಭಕ್ತಿ ಗೀತೆಯನ್ನು ಹಾಡಿದರು













