

ಕೊಚ್ಚಿ: ಕೇರಳ ಮೂಲದ ದೀಪಕ್ ಸಾವು ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ತಾನು ಮಾಡದೇ ಇರುವ ತಪ್ಪಿಗೆ ಅಮಾಯಕ ದೀಪಕ್ ಸಾವಿಗೆ ಶರಣಾಗಿದ್ದಾನೆ. ಇಷ್ಟೆಲ್ಲ ಆದರೂ ಶಿಮ್ಮಿತಾ ಮುಸ್ತಫಾ ಅವರಿಗೆ ಸ್ವಲ್ಪವೂ ಪಶ್ಚಾತ್ತಾಪವಿಲ್ಲ ಎನ್ನುವುದನ್ನು ನ್ಯಾಯಾಲಯವು ಗಮನಿಸಿದೆ.
ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಮಿತಾ ಅವರಿಗೆ ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪ್ರಾಸಿಕ್ಯೂಷನ್ ವಾದ ಮಾಡಿದ್ದು, ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲು ಮಾಡಬೇಕಾಗಿರುವ ಕಾರಣಕ್ಕೆ ಆರೋಪಿಯನ್ನು ಬಿಡುಗಡೆ ಮಾಡುವುದು ತನಿಖೆ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯವು ಆಕೆಗೆ ಜಾಮೀನು ತಿರಸ್ಕರಿಸಿದೆ.
ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಆಕೆಯನ್ನು ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಈಕೆ ಜಾಮೀನಿನಾಗಿ ಅರ್ಜಿಯನ್ನು ದಾಖಲಿಸಿದ್ದಳು. ಈ ಅರ್ಜಿಯನ್ನು ತಿರಸ್ಕರಿಸಲಾಗಿದೆ.













