Home » ಬಂಟ್ವಾಳ | ಸರ್ವಿಸ್ ಆಟೋ ಪಲ್ಟಿ, ಓರ್ವ ಸಾವು, 7 ಮಂದಿಗೆ ಗಾಯ

ಬಂಟ್ವಾಳ | ಸರ್ವಿಸ್ ಆಟೋ ಪಲ್ಟಿ, ಓರ್ವ ಸಾವು, 7 ಮಂದಿಗೆ ಗಾಯ

0 comments

ಸರ್ವಿಸ್ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡ ಘಟನೆ ಬಂಟ್ವಾಳದ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಆಟೋರಿಕ್ಷಾವು ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಬರುತ್ತಿದ್ದ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಘಟನೆಯಲ್ಲಿ ತೀವ್ರ ಗಾಯಗೊಂಡ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನುಳಿದವರು ಅಲ್ಪಸ್ವಲ್ಪ ಗಾಯಗೊಂಡಿದ್ದು, ಅವರನ್ನು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment