Home » ಕೊರೊನಾ ಏರಿಕೆ ಹಿನ್ನೆಲೆ | ಮತ್ತೆ ವೀಕೆಂಡ್,ನೈಟ್ ಕರ್ಫ್ಯೂ ಮತ್ತೆ ಜಾರಿ ಸಾಧ್ಯತೆ

ಕೊರೊನಾ ಏರಿಕೆ ಹಿನ್ನೆಲೆ | ಮತ್ತೆ ವೀಕೆಂಡ್,ನೈಟ್ ಕರ್ಫ್ಯೂ ಮತ್ತೆ ಜಾರಿ ಸಾಧ್ಯತೆ

by Praveen Chennavara
0 comments

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಇತ್ತೀಚೆಗೆ ಕೊರೊನಾ ನಿಯಮಾವಳಿಗಳನ್ನು ಸಡಿಲಿಕೆ ಮಾಡಿ ಓಡಾಟಕ್ಕೆ ಅನುಮತಿ ನೀಡಲಾಗಿತ್ತು.ಆದರೆ ಈಗ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು ಮೂರನೇ ಅಲೆ ಭೀತಿ ಶುರುವಾಗಿದೆ.

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 500ರ ಗಡಿದಾಟಿದ ಬೆನ್ನಲ್ಲೇ ಸರ್ಕಾರದ ಹಂತದಲ್ಲಿ ಮಹತ್ವದ ಚರ್ಚೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ರಾತ್ರಿ ಕರ್ಪ್ಯೂ ಹಾಗೂ ವಾರಾಂತ್ಯದ ಕರ್ಪ್ಯೂ ಜಾರಿಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಿಯಮ ಬಿಗಿಗೊಳಿಸುವ ಅವಶ್ಯಕತೆ ಇರುವ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಂದ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಬಿಬಿಎಂಪಿ ಮನವಿಯನ್ನ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದ್ದು, ನೈಟ್ ಕರ್ಪ್ಯೂ ಹಾಗೂ ವಿಕೇಂಡ್ ಕರ್ಪ್ಯೂ ಸೇರಿದಂತೆ ಇನ್ನಿತರ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡುವ ಸಾಧ್ಯತೆ ಇದೆ.

You may also like

Leave a Comment