Home » ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ | ಓರ್ವ ಯೋಧ ಹುತಾತ್ಮ

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ | ಓರ್ವ ಯೋಧ ಹುತಾತ್ಮ

0 comments

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರೊಂದು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಲಖನಪುರ ಎಂಬಲ್ಲಿ ಪತನಗೊಂಡು, ಓರ್ವ ಯೋಧ ಹುತಾತ್ಮರಾದ ಘಟನೆ ನಡೆದಿದೆ.

ಎಚ್‍ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎದುರಾದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲೆಟ್‍ಗಳಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ ಓರ್ವ ಯೋಧ ಮೃತಪಟ್ಟು, ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಪಠಾಣ್‍ಕೋಟ್‍ನಿಂದ ಬರುತ್ತಿದ್ದ ಹೆಲಿಕಾಪ್ಟರ್ ಲಖನಪುರದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಈ ಘಟನೆ ಸಂಭವಿಸಿದೆ. ಕೂಡಲೇ ಇಬ್ಬರು ಪೈಲೆಟ್‍ಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಒಬ್ಬ ಯೋಧ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

You may also like

Leave a Comment