Home » ಮಹಿಳೆ ಚಲಾಯಿಸುತ್ತಿದ್ದ ಕಾರು ಹೇರೂರು ಸೇತುವೆ ಮೇಲೆ ಕಂಟೈನರ್ ಗೆ ಡಿಕ್ಕಿ | ಶೂಟಿಂಗಿಗೆ ತೆರಳುವಾಗ ನಡೆದ ಅವಘಡದಲ್ಲಿ ನಾಲ್ವರಿಗೆ ಗಾಯ

ಮಹಿಳೆ ಚಲಾಯಿಸುತ್ತಿದ್ದ ಕಾರು ಹೇರೂರು ಸೇತುವೆ ಮೇಲೆ ಕಂಟೈನರ್ ಗೆ ಡಿಕ್ಕಿ | ಶೂಟಿಂಗಿಗೆ ತೆರಳುವಾಗ ನಡೆದ ಅವಘಡದಲ್ಲಿ ನಾಲ್ವರಿಗೆ ಗಾಯ

by ಹೊಸಕನ್ನಡ
0 comments

ಬ್ರಹ್ಮಾವರ ಬಳಿಯ ಹೇರೂರು ಸೇತುವೆ ಮೇಲೆ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ.

ಇಂದು ಬೆಳಗ್ಗೆ 7.15 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಂಗಳೂರಿನಿಂದ ಕುಂದಾಪುರಕ್ಕೆ ಕಾರಿನಲ್ಲಿ ನಾಲೈದು ಮಂದಿ ಪ್ರಯಾಣಿಸುತ್ತಿದ್ದರು. ಕಾರನ್ನು ಓರ್ವ ಮಹಿಳೆ ಚಲಾಯಿಸುತ್ತಿದ್ದಳು ಎಂದು ತಿಳಿದುಬಂದಿದೆ. ಶೂಟಿಂಗ್ ಹಿನ್ನೆಲೆ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ಕು ಮಂದಿಯನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆಯ ಗುಂಡಿಗಳನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಂಟೈನರ್‌ಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

You may also like

Leave a Comment