Home » ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರ

ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರ

by Praveen Chennavara
0 comments

ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.

ಸಿದ್ದಕಟ್ಟೆಯ ಅನಿಲ್ ಎಂಬಾತ ಅತ್ಯಾಚಾರಗೈದ ಆರೋಪಿಯಾಗಿದ್ದು , ತಲೆಮರೆಸಿಕೊಂಡಿದ್ದಾನೆ. ಆ. 11 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮಹಿಳೆಯ ಪತಿ ನಿಧನರಾಗಿದ್ದು, ಮಗಳಿಗೆ ವಿವಾಹವಾಗಿದೆ. ಏಕಾಂಗಿಯಾಗಿದ್ದ ಅವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.

ಬಳಿಕ ಅತ್ಯಾಚಾರಕ್ಕೊಳಗಾದ ಮಹಿಳೆ ಮಗಳಿಗೆ ಹಾಗೂ ಅಳಿಯನಿಗೆ ಪೋನ್ ಕರೆ ಮಾಡಿ ತಿಳಿಸಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.

You may also like

Leave a Comment