Home » ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ | ಸಂಪೂರ್ಣ ಸುಟ್ಟು ಕರಕಲಾದ ಲಾರಿ

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ | ಸಂಪೂರ್ಣ ಸುಟ್ಟು ಕರಕಲಾದ ಲಾರಿ

0 comments

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ, ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ನಡೆದಿದೆ.

ಮಂಗಳೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಆಯಿಲ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ತಕ್ಷಣ ಚಾಲಕ ಕೂಡಲೇ ಲಾರಿ ನಿಲ್ಲಿಸಿದ್ದಾನೆ. ಈ ವೇಳೆ ನೋಡ ನೋಡುತ್ತಿದ್ದಂತೆ ಲಾರಿಗೆ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ಸುಟ್ಟು ಹೋಗಿದೆ.‌ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಲಾರಿ ನಿಲ್ಲಿಸಿ, ಕೆಳಗೆ ಇಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದಾರೆ. ಬೆಂಕಿಗೆ ಕಾರಣವೇನೆಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

You may also like

Leave a Comment