Home » ದ.ಕ | ಆ.21,22ರಂದು ವಾರಾಂತ್ಯ ಕರ್ಫ್ಯೂ ಇರಲಿದೆ- ಜಿಲ್ಲಾಧಿಕಾರಿ

ದ.ಕ | ಆ.21,22ರಂದು ವಾರಾಂತ್ಯ ಕರ್ಫ್ಯೂ ಇರಲಿದೆ- ಜಿಲ್ಲಾಧಿಕಾರಿ

by Praveen Chennavara
0 comments

ದ.ಕ.ಜಿಲ್ಲೆಯಲ್ಲಿನ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ವಾರವೂ (ಆ.21,22) ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಆ.20ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಪ್ಯೂ ಆ.23ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ. ಆ.21ರ ಶನಿವಾರ ಮತ್ತು ಆ.22ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಅವಧಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯಬಹುದು, ಬೀದಿ ಬದಿ ವ್ಯಾಪಾರ ಮಾಡಬಹುದು. ಹಾಗಾಗಿ ಸಾರ್ವಜನಿಕರು ಈ ಅವಧಿಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಆ ಬಳಿಕ ಅನಗತ್ಯವಾಗಿ ತಿರುಗಾಡಬಾರದು. ವಾರಾಂತ್ಯ ಕರ್ಪ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಆದರೆ ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ಕೇವಲ ಪಾರ್ಸಲ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

You may also like

Leave a Comment