Home » ಭರ್ಜರಿ ಗುಡ್ ನ್ಯೂಸ್ ನೀಡಿದ ಸಿಎಂ| ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿಗೆ ಬರಲಿದೆ ಎಂದ ಬೊಮ್ಮಾಯಿ

ಭರ್ಜರಿ ಗುಡ್ ನ್ಯೂಸ್ ನೀಡಿದ ಸಿಎಂ| ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿಗೆ ಬರಲಿದೆ ಎಂದ ಬೊಮ್ಮಾಯಿ

0 comments

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು,ರಾಜ್ಯದಲ್ಲಿ ಶೀಘ್ರವೇ ಹೊಸ ಮರಳು ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಶಿಗ್ಗಾಂವ್ ನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು,ಅಭಿವೃದ್ಧಿಯ ಯೋಜನೆಯ ಬಗ್ಗೆ ಮಾತನಾಡುತ್ತಾ ರಾಜ್ಯದಲ್ಲಿ ಹೊಸ ಮರಳು ನೀತಿಯ ಕುರಿತು ಮಾತಾಡಿದ್ದಾರೆ.

ಮನೆ ಕಟ್ಟೋರಿಗೆ ಸಿಹಿ ಸುದ್ದಿ ನೀಡಿದ್ದು, ಅದೆಷ್ಟೋ ಜನ ಮನೆ ಕಟ್ಟಲು ಮರಳಿನ ಸಮಸ್ಯೆ ಇಂದ ಸೋತಿದ್ದಾರೆ. ಆದರೆ ಈಗ ಮುಖ್ಯಮಂತ್ರಿಯವರು ಈ ಸಮಸ್ಯೆ ನಿವಾರಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ರಾಜ್ಯದಲ್ಲಿ ಹೊಸ ಮರಳು ನೀತಿಯನ್ನು ಸರ್ಕಾರ ಕ್ರಮಕೈಗೊಂಡಿದ್ದು ಶೀಘ್ರದಲ್ಲೇ ಜಾರಿಯಾಗಲಿದೆ.
ರಾಜ್ಯದಲ್ಲಿ ಅನೇಕ ಮರಳು ನೀತಿಗಳಿಂದ ಗೊಂದಲವಾಗಿದೆ. ಹೀಗಾಗಿ ಹೊಸ ಮರಳು ನೀತಿ ಜಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕರಡು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಆಶ್ರಯ ಯೋಜನೆ ಫಲಾನುಭವಿಗಳು, ಜನ ಸಾಮಾನ್ಯರು ಹಾಗೂ ಸರ್ಕಾರಿ ಯೋಜನೆಗಳಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಹೊಸ ಮರಳು ನೀತಿ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

You may also like

Leave a Comment