Home » ಲಸಿಕೆಗಾಗಿ ಪರದಾಡುತ್ತಿರುವವರಿಗೆ ಸಿಹಿ ಸುದ್ದಿ | ನವೆಂಬರ್ ಅಂತ್ಯದೊಳಗೆ ಎಲ್ಲರಿಗೂ ಸಿಗಲಿದೆ ಎರಡು ಡೋಸ್ ವ್ಯಾಕ್ಸಿನ್ !!

ಲಸಿಕೆಗಾಗಿ ಪರದಾಡುತ್ತಿರುವವರಿಗೆ ಸಿಹಿ ಸುದ್ದಿ | ನವೆಂಬರ್ ಅಂತ್ಯದೊಳಗೆ ಎಲ್ಲರಿಗೂ ಸಿಗಲಿದೆ ಎರಡು ಡೋಸ್ ವ್ಯಾಕ್ಸಿನ್ !!

0 comments

ಬೆಂಗಳೂರು : ಕೊರೋನ ಸಂಕಷ್ಟದಲ್ಲಿ ಲಸಿಕೆಗಾಗಿ ಒದ್ದಾಡುತಿದ್ದವರಿಗೆ ಇದೀಗ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ತಿಳಿಸಿದ್ದಾರೆ.

ರಾಜ್ಯದ ಎಲ್ಲ ವಯಸ್ಕರಿಗೂ ನವೆಂಬರ್ ಅಂತ್ಯದೊಳಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲರಿಗೂ ಮೊದಲ ಡೋಸ್ ಲಸಿಕೆ ನೀಡುವಂತೆ ಸೂಚಿಸಲಾಗಿದೆ. ನವೆಂಬರ್ ಅಂತ್ಯದೊಳಗೆ ಎರಡೂ ಡೋಸ್ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರದ ಸರಾಸರಿ ಶೇಕಡ 0.7ರಷ್ಟಿದೆ. ಯಾವುದೇ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಾದರೆ ಆ ಜಿಲ್ಲೆಗೆ ಪ್ರತ್ಯೇಕವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

You may also like

Leave a Comment