Home » ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಆತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ!! |ಆಕೆ ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟು ವಿದೇಶಕ್ಕೆ ಹಾರಿದ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಆತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ!! |ಆಕೆ ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟು ವಿದೇಶಕ್ಕೆ ಹಾರಿದ

by Praveen Chennavara
0 comments

ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆಯೇ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ನಿವಾಸಿಯಾಗಿರುವ ಆರೋಪಿ ಮಸೂದ್ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು, ಇದೀಗ ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹಾಗಾಗಿ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದು, ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ.

ಇದೀಗ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

You may also like

Leave a Comment