Home » ಕಡಬ : ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ

ಕಡಬ : ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ

by Praveen Chennavara
0 comments

ಕಡಬ: ಕಾರ್ಮಿಕ ಇಲಾಖೆಯಿಂದ ಪತ್ರಕರ್ತರಿಗೆ ನೀಡಲಾದ ಆಹಾರ ಧಾನ್ಯಗಳ ಕಿಟ್ ನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರಿಗೆ ಗುರುವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ವಿತರಣೆ ಮಾಡಲಾಯಿತು.

ಅತಿಥಿಯಾಗಿದ್ದ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅವರು ಕಿಟ್ ವಿತರಿಸಿ ಶುಭಹಾರೈಸಿದರು. ಕಾರ್ಯನಿರತ ಪತ್ರಕರ್ತರ ದ.ಕ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ , ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ ಉಪಸ್ಥಿತರಿದ್ದರು.

ಕಡಬ ತಾಲೂಕು ಪತ್ರಕರ್ತರ ಸಂಘದ ಸಂಘದ ಅಧ್ಯಕ್ಷ ನಾಗರಾಜ್ ಎನ್ ಕೆ ಸ್ವಾಗತಿಸಿದರು. ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ ವಂದಿಸಿದರು.

You may also like

Leave a Comment