Home » ಕಾಣಿಯೂರು : ಸಚಿವ ಎಸ್.ಅಂಗಾರ ಅವರಿಂದ ರಸ್ತೆ ಕಾಮಗಾರಿ ವೀಕ್ಷಣೆ

ಕಾಣಿಯೂರು : ಸಚಿವ ಎಸ್.ಅಂಗಾರ ಅವರಿಂದ ರಸ್ತೆ ಕಾಮಗಾರಿ ವೀಕ್ಷಣೆ

by Praveen Chennavara
0 comments

ಕಾಣಿಯೂರು:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕು ಕಾಣಿಯೂರು ಗ್ರಾಮದ ಕಾಣಿಯೂರು ಬಾಂತೈ- ಲಕ್ಷ್ಮೀನರಸಿಂಹ ಭಜನಾ ಮಂದಿರ-ಪ್ರಗತಿ ಶಾಲಾ ರಸ್ತೆಯ 30 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಕಾಂಕ್ರೀಟೀಕರಣ ಕಾಮಗಾರಿಯನ್ನು ಬಂದರು- ಮೀನುಗಾರಿಕೆ,ಒಳನಾಡು ಜಲಸಾರಿಗೆ ಸಚಿವ,ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಅಂಗಾರ ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ರೈ ಕೆಡೆಂಜಿ, ಸುಬೋಧ್ ಶೆಟ್ಟಿ ಮೇನಾಲ,ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ, ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದುನಡ್ಕ,ಗ್ರಾ.ಪಂ ಸದಸ್ಯ ರಾಮಣ್ಣ ಗೌಡ ಮುಗರಂಜ, ಬಿಜೆಪಿ ಶಕ್ತಿ ಕೇಂದ್ರದ ಸಹಪ್ರಮುಖ್ ಸುರೇಶ್ ಓಡಬಾಯಿ,ಪ್ರಗತಿ ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ,ಮಾಜಿ ಜಿ.ಪಂ.ಸದಸ್ಯೆ ಪುಷ್ಪಾವತಿ ಕಳುವಾಜೆ,ಧರ್ಮೇಂದ್ರ ಗೌಡ ಕಟ್ಟತ್ತಾರು, ಜಯಂತ ಅಬೀರ ಮತ್ತಿತರರು ಉಪಸ್ಥಿತರಿದ್ದರು.

You may also like

Leave a Comment