ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಪಲ್ಟಿಯಾಗಿದೆ. ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.