Home » ಮಂಗಳೂರು | ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ, ಓರ್ವನ ಬಂಧನ

ಮಂಗಳೂರು | ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ, ಓರ್ವನ ಬಂಧನ

0 comments

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ.

ಬಂಧಿತನನ್ನು ಕಾಸರಗೋಡು ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈತ ದುಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ವಿಮಾಣ ನಿಲ್ದಾಣಕ್ಕೆ ಬಂದಿಳಿದಿದ್ದು, ವಿಶೇಷ ವಿನ್ಯಾಸದ ಒಳ ಉಡುಪಿನ ಮೂಲಕ ಚಿನ್ನವನ್ನು ಪುಡಿ ರೂಪದಲ್ಲಿ ಸಾಗಾಟ ಮಾಡಲು ಯತ್ನಿಸಿದ್ದ ಎನ್ನಲಾಗಿದೆ.

ವ್ಯಕ್ತಿಯನ್ನು ತಪಾಸಣೆ ನಡೆಸಿದ ಸಂದರ್ಭ ಸುಮಾರು 43,88,400 ರೂ. ಮೌಲ್ಯದ 920.000 ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment