Home » ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ಹಾಗೂ ದರ್ಶನಕ್ಕೆ 2 ಡೋಸ್ ಲಸಿಕೆ, ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ಹಾಗೂ ದರ್ಶನಕ್ಕೆ 2 ಡೋಸ್ ಲಸಿಕೆ, ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

by Praveen Chennavara
0 comments

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ.

2 ಡೋಸ್‌ ಲಸಿಕೆ ಪಡೆದ ಮತ್ತು 72 ಗಂಟೆ ಮುಂಚಿತವಾಗಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಸೇವೆ ಮತ್ತು ದರ್ಶನ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಲ್ಲಲ್ಲಿ ಭದ್ರತಾ ಸಿಬಂದಿ ನಿಯೋಜಿಸಲಾಗಿದೆ ಮಾತ್ರವಲ್ಲದೇ ಈ ಸಿಬಂದಿ ಭಕ್ತರಿಗೆ ಕೋವಿಡ್‌ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

100 ಸರ್ಪಸಂಸ್ಕಾರ ಸೇವೆ
ಪ್ರತಿದಿನ 100 ಭಕ್ತರಿಗೆ ಮಾತ್ರ ಸರ್ಪಸಂಸ್ಕಾರ ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ 25 ನಾಗಪ್ರತಿಷ್ಠೆ, 4 ಪಂಚಾಮೃತ ಮಹಾಭಿಷೇಕಕ್ಕೆ ಮಾತ್ರ ಅವಕಾಶವಿದೆ. ಪ್ರತಿ ದಿನ 4 ಪಾಳಿಯಲ್ಲಿ ಆಶ್ಲೇಷಾ ಬಲಿ ಸೇವೆ ನಡೆಯುತ್ತಿದ್ದು, ಒಂದು ಪಾಳಿಯಲ್ಲಿ 70 ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಸೇವೆಗೆ ಪ್ರತಿ ರಸೀದಿಯಿಂದ 2 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

You may also like

Leave a Comment