Home » ಉಪ್ಪಿನಂಗಡಿ | ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ, ಮಗು ಸ್ಥಳದಲ್ಲೇ ಸಾವು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

ಉಪ್ಪಿನಂಗಡಿ | ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ, ಮಗು ಸ್ಥಳದಲ್ಲೇ ಸಾವು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

0 comments

ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಇಂದು ನಡೆದಿದೆ.

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ತಾಯಿ ಮಗು ರಸ್ತೆ ದಾಟುತ್ತಿದ್ದಾಗ ದಿಢೀರನೆ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಇಬ್ಬರ ಮೇಲೆ ಚಲಿಸಿದೆ. ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದಿಕ್ ಎಂಬವರ ಪತ್ನಿ ಸಾಹಿದಾ (25ವ.) ಮತ್ತು ಪುತ್ರ ಸಾಹಿಲ್ (1.5ವ.) ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಬಸ್ಸಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ ಗಳ ನಡುವಿನ ಪೈಪೋಟಿಯಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಬಸ್, ನಿಲ್ದಾಣದೊಳಗೆ ಪ್ರವೇಶಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ

ಸುಳ್ಯ : ಮೂರೂರು ಬಳಿ ಲಾರಿ-ಓಮ್ನಿ ಡಿಕ್ಕಿ ,ನಾಲ್ವರಿಗೆ ಗಾಯ

You may also like

Leave a Comment