Home » ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ ,ಇಬ್ಬರ ಬಂಧನ, 2 ಲಾರಿ,3 ಬೈಕ್ ವಶಕ್ಕೆ

ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ ,ಇಬ್ಬರ ಬಂಧನ, 2 ಲಾರಿ,3 ಬೈಕ್ ವಶಕ್ಕೆ

by Praveen Chennavara
0 comments

ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಪೊಲೀಸರು ವಾಹನಗಳ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

ಕಲ್ಲಾಪು ನಿವಾಸಿ ಮಯ್ಯದ್ಧಿ ಹಾಗೂ ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ದಾಳಿ ವೇಳೆ ಎರಡು ಲಾರಿ, ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ಕಡೆಯಿಂದ ಕೇರಳಕ್ಕೆ ರಾತ್ರಿ ವೇಳೆ ನಿರಂತರವಾಗಿ ಮರಳು ಸಾಗಾಟ ನಡೆಯುತ್ತಿತ್ತು ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಡಿಸಿಪಿ ಹರಿರಾಂ ಹಾಗೂ ಉಳ್ಳಾಲ ಇನ್ ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

You may also like

Leave a Comment