Home » ಉಪ ರಾಷ್ಟ್ರಪತಿ ಹುದ್ದೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ? | ದಾಳ ಉರುಳಿಸಿತೇ ಬಿಜೆಪಿ ?

ಉಪ ರಾಷ್ಟ್ರಪತಿ ಹುದ್ದೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ? | ದಾಳ ಉರುಳಿಸಿತೇ ಬಿಜೆಪಿ ?

by Praveen Chennavara
0 comments

ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ಕುರಿತಂತೆ ಬಿಜೆಪಿ ಉನ್ನತಮಟ್ಟದ ಸಭೆ ನಡೆಸಿದ್ದು, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರನ್ನು ಉಪರಾಷ್ಟ್ರಪತಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಬಿಜೆಪಿ ವತಿಯಿಂದ ಗುಲಾಂ ನಬಿ ಆಜಾದ್‍ರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ, ಉಪರಾಷ್ಟ್ರಪತಿಯಾಗಿ  ಆಯ್ಕೆ ಮಾಡುವ ಕುರಿತು ಮಹತ್ವದ ಬೆಳವಣಿಗೆಗಳು ನಡೆದಿವೆ ಎನ್ನಲಾಗಿದೆ. ಆ ಮೂಲಕ ಮೋದಿ ಈವಾಗ ಗಳಿಸಿದ ಜನಪ್ರಿಯತೆಯನ್ನು ಮತ್ತಷ್ಟು ಉತ್ತುಂಗಕ್ಕೇರಿಸುವ ಪ್ರಯತ್ನ ನಡೆದಿದೆ.

ಫೆಬ್ರವರಿ ತಿಂಗಳಲ್ಲಿ ಪಂಚರಾಜ್ಯ ಚುನಾವಣೆ ಬಳಿಕ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು,ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮಾಡಬಹುದಾದ ಬದಲಾವಣೆಗಳ ಕುರಿತು ಮೋದಿ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳವ ಸಾಧ್ಯತೆ ಇದೆ.

ರಾಷ್ಟ್ರಪತಿ ಆಯ್ಕೆಗೆ ಶಾಸಕರು, ಸಂಸದರು ಮತ ಚಲಾಯಿಸಲಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸದರು ಮಾತ್ರ ಮತ ಹಾಕಲಿದ್ದಾರೆ.

You may also like

Leave a Comment