Home » ಬಿಜೆಪಿ ಸೋಲಿನಿಂದ ಪಕ್ಷದ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂದ ಡಿ.ಕೆ. ಶಿವಕುಮಾರ್ ಗೆ ಬೊಮ್ಮಾಯಿ ತಿರುಗೇಟು

ಬಿಜೆಪಿ ಸೋಲಿನಿಂದ ಪಕ್ಷದ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂದ ಡಿ.ಕೆ. ಶಿವಕುಮಾರ್ ಗೆ ಬೊಮ್ಮಾಯಿ ತಿರುಗೇಟು

0 comments

ಹುಬ್ಬಳ್ಳಿ: ಹಾನಗಲ್ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಪರಿಣಾಮ ವಿರೋಧ ಪಕ್ಷದಿಂದ ಅದೆಷ್ಟೋ ಟೀಕೆಯ ಮಾತುಗಳು ಕೇಳಿಬರುತ್ತಿದೆ. ಇದೇ ವಿಚಾರವಾಗಿ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಬೆಂಗಳೂರಿಗೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ್ದು,ಈ ಸಂದರ್ಭದಲ್ಲಿ ಹಾನಗಲ್ ಸೋಲಿನ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಸಿಂದಗಿಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ರಾಷ್ಟ್ರಮಟ್ಟದಲ್ಲಿ ಪಕ್ಷ ವಿಭಜನೆ ಯಾಗುವ ಹಂತದಲ್ಲಿದ್ದು ಡಿ. ಕೆ ಶಿವಕುಮಾರ್ ತಮ್ಮ ಪಕ್ಷದತ್ತ ಮೊದಲು ಗಮನ ಹರಿಸಲಿ ಎಂದು ತಿರುಗೇಟು ನೀಡಿದ್ದಾರೆ.

You may also like

Leave a Comment