

ಕಡಬ : ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ನ.6 ರ ಶನಿವಾರ ಬೆಳಿಗ್ಗೆ ಗಂಟೆ 8.00ಕ್ಕೆ ನಡೆಯುವ ವಿಶೇಷ ಪೂಜಾ ಕಾರ್ಯದಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷರಾಗಿ ಯಶಸ್ವೀ ಬ್ರಹ್ಮಕಲಶೋತ್ಸವ ನಡೆಸಿ,ಕೇಂದ್ರ ಸಚಿವರಾದ ಬಳಿಕ ಪ್ರಥಮ ಬಾರಿಗೆ ಶೋಭಾ ಕರಂದ್ಲಾಜೆ ,ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷರಾಗಿದ್ದ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಎಸ್. ಅಂಗಾರ ಅವರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಎಡಮಂಗಲ ಗ್ರಾ.ಪಂ.ಅಧ್ಯಕ್ಷೆ ಸುಮಾ ನೂಚಿಲ, ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ,ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು,ಸುಳ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ರೈ,ಅನೂಪ್ ಆಳ್ವ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
