ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ.
ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್ ಮರವೊಂದು ಬೈಕ್ ನ ಮೇಲೆ ಬಿದ್ದಿದೆ. ಪರಿಣಾಮವಾಗಿ ಗಂಭೀರ ಗಾಯಗೊಂಡಿದ್ದ ನವೀನ್ ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.